ಹೈದರಾಬಾದ್: ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಉಸ್ಮಾನಿಯಾ, ಹೈದರ್‌ಗುಡ ಮತ್ತು ಡಿಆರ್‌ಡಿಒ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿ ನಂದಿಸಲಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಒಟ್ಟು 11 ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂಬ ಶಂಕೆ ಇದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಕಿ ಅವಘಡದಿಂದ ಸ್ಥಳೀಯರು ಕೆಲಕಾಲ ತೀವ್ರ ಆತಂಕಗೊಂಡಿದ್ದರು.
ಹೈದರಾಬಾದ್‌ನಲ್ಲಿ ಅಗ್ನಿ ಅವಘಡದಲ್ಲಿ 17 ಮಂದಿ ಸಾವು
2025-05-18 12:44:20- 31