ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ 2 ತಿಂಗಳು ರಿಲೀಫ್ ಸಿಕ್ಕಿದೆ. ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ದರ್ಶನ್ ಅವರ ಜಾಮೀನು ರದ್ದು ಮಾಡಬೇಕು ಎಂದು ಪೊಲೀಸರು ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದರು. ಈ ವಿಚಾರದಲ್ಲಿ ಕೋರ್ಟ್ ದರ್ಶನ್ಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಬೇಸಿಗೆ ರಜೆ ಬಳಿಕ ಸುಪ್ರಿಂ ಕೋರ್ಟ್ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಜುಲೈ 14ಕ್ಕೆ ಸುಪ್ರಿಂ ಕೋರ್ಟ್ ರಜೆ ಅಂತ್ಯವಾಗಲಿದೆ. ದರ್ಶನ್ ಮತ್ತು ಇತರೇ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಪೀಠದಲ್ಲಿ ನಡೆಯಿತು. ಕಲಾಪ ಆರಂಭವಾಗುತ್ತಿದ್ದಂತೆ ಸರ್ಕಾರಿ ವಕೀಲರು ಮನ್ಷನ್ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್ ಬೇಸಿಗೆ ರಜೆ ಬಳಿಕ ವಿಚಾರಣೆ ನಡೆಸುವುದಾಗಿ ಹೇಳಿತು.
ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ 2 ತಿಂಗಳು ರಿಲೀಫ್
2025-05-21 12:20:25- 59