ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕ್ರಮ ದುರಾದೃಷ್ಟ :ಬಿ ವೈ ವಿಜಯೇಂದ್ರ !
2025-03-27 13:36:36- 7