ಪ್ರಯಾಗ್‌ರಾಜ್: ಮಹಾ ಕುಂಭಮೇಳಕ್ಕೆ ಹೋಗುವಾಗ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ.
ಪ್ರಯಾಗ್‌ರಾಜ್ ಹಾಗು ಮಿರ್ಜಾಪುರ ಹೆದ್ದಾರಿಯಲ್ಲಿ ಬೊಲೆರೊ ಕಾರಿಗೆ ಬಸ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಈ ಘಟನೆಯಲ್ಲಿ 19 ಜನರಿಗೆ ಗಾಯಗಳಾಗಿದ್ದು 10 ಜನರು ಸಾವನ್ನಪಿದ್ದಾರೆ.
ಗಂಗಾ ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್ ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಕಾರಿಗೆ ರಾಜ್‌ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ನಡುವೆ ಕುಂಭಮೇಳಕ್ಕೆ ಹೋಗುವಾಗ ಅಪಘಾತ ಸಂಖ್ಯೆ ಹೆಚ್ಚಾಗುತ್ತಿದೆ.