News / Blog Details

  • Home
  • >
  • News / Blog Details

ರಜತ್‌ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

  • 14
img ರಜತ್‌ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ
Font size:
Print

ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ಬಿಗ್ ಬಾಸ್ ರಜತ್‌ಗೆ 24ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ನಿಯಮಗಳನ್ನು ಉಲ್ಲಂಘಿಸಿದ್ದ ರಜತ್​ನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿ ನಿನ್ನೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು, ನ್ಯಾಯಧೀಶರು ರಜತ್​ನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಇದೀಗ ರಜತ್​ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರೀಲ್ಸ್ ಕೇಸ್‌ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ 2 ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ನಿನ್ನೆ ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಆದೇಶದ ಅನ್ವಯ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಿತ್ತು. ನಿನ್ನೆಯೆ ಜಾಮೀನಿಗೆ ಅರ್ಜಿ ಸಲ್ಲಿಸಿದ ರಜತ್​ ಅರ್ಜಿಯನ್ನು ನಾಳೆಗೆ ಮುಂದೂಡಿದ ನ್ಯಾಯಾಲಯ. ಇಂದು ವಿಚಾರಣೆ ನಡೆಸಿ ರಜತ್​ಗೆ ಜಾಮೀನು ಮಂಜೂರು ಮಾಡಿದೆ.
 

No Reviews