News / Blog Details

  • Home
  • >
  • News / Blog Details

ಬಿಜೆಪಿಯವರ ರೈತ ವಿರೋಧಿಗಳು ಡಿಕೆ ಶಿವಕುಮಾರ್ !

  • 74
img ಬಿಜೆಪಿಯವರ ರೈತ ವಿರೋಧಿಗಳು ಡಿಕೆ ಶಿವಕುಮಾರ್ !
Font size:
Print

ರೈತರಿಗೆ ಸಹಾಯವಾಗಲಿ ಎಂದು ರಾಜ್ಯ ಸರ್ಕಾರ ಹಾಲಿನ ದರ ಹೆಚ್ಚುಕೆ ಮಾಡಿದೆ. ಇದರ ವಿರುದ್ಧ ಪ್ರೋಟೆಸ್ಟ್ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ್ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ  ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ನಾವು ವಿದ್ಯುತ್ ದರ ಕಡಿಮೆ ಮಾಡಿದಾಗ ಅವರು ಮಾತನಾಡಲಿಲ್ಲ, ಅವರಿಗೆ ಜನರ ಮೇಲೆ ಕಾಳಜಿ ಇದ್ದರೆ, ಪೆಟ್ರೋಲ್, ಡೀಸೆಲ್, ಜಾನುವಾರುಗಳಿಗೆ ಹಾಕುವ ಬೂಸಾ ಧರವನ್ನು ಇಳಿಸಲಿ. ದರ ಹೆಚ್ಚಿಗೆ ಬಳಿಕವೂ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಹಾಲು ಮೊಸರಿನ ಬೆಲೆ ಕಡಿಮೆ ಇದೆ ಎಂದು ಹೇಳಿದ್ದಾರೆ.

 ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರವನ್ನು ಪ್ರತಿ ಲೀಟರ್ ಗೆ ಕನಿಷ್ಠ ಒಂದು ಪೈಸೆಯಷ್ಟು ಹೆಚ್ಚಿಗೆ ಮಾಡಲೇಬೇಕಾಗಿದೆ. ಬಡವರಿಗೆ ಹೊರೆಯಾಗದಂತೆ ನೀರಿನ ಬೆಲೆ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಜಲ ಮಂಡಳಿ ವಾರ್ಷಿಕವಾಗಿ ಒಂದು ಸಾವಿರ ಕೋಟಿ ನಷ್ಟದಲ್ಲಿದೆ.ಮುಂದಿನ ಹಂತಗಳ ಯೋಜನೆ ಕೈಗೆತ್ತಿಗೊಳ್ಳಬೇಕಾದರೆ ದರ ಏರಿಕೆ ಅನಿವಾರ್ಯ. ಇದಕ್ಕೂ ಮುನ್ನ ಜನರಿಗೂ ನೀರಿನ ಪ್ರಾಮುಖ್ಯತೆ ಅರಿಯುವಂತೆ ಮಾಡಬೇಕು ಎಂದು ತಿಳಿಸಿದರು

No Reviews