ಬೆಂಗಳೂರು: ಫ್ಲೈಓವರ್ ಮೇಲೆ ಲಾರಿಯೊಂದು ಏಕಾಏಕಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕೂಡಲೇ ಲಾರಿಯಿಂದ ಕೆಳಗಿಳಿದಿದ್ದಾರೆ. ಬೆಂಕಿ ಹೊತ್ತಿಕೊಂಡ ಹಿನ್ನೆಲೆ ನಗರದ ಕಡೆಗೆ ಕೆಲ ಕಾಲ ಪೀಣ್ಯ ಫ್ಲೈಓವರ್ ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ನಗರದ ಕಡೆಗೆ ಬರುವವರು ಫ್ಲೈಓವರ್ ಕೆಳಗಡೆ ಬರುವಂತೆ ಸೂಚನೆ ನೀಡಲಾಗಿತ್ತು.
ಘಟನೆ ನಡೆದ ಕೂಡಲೇ ಸ್ಥಳೀಯರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಫ್ಲೈಓವರ್ ಮೇಲೆಯೇ ಲಾರಿ ಧಗಧಗ- ಚಾಲಕ ಪಾರು
2025-04-17 17:11:23- 15