News / Blog Details

  • Home
  • >
  • News / Blog Details

ಗೃಹ ಸಚಿವ ಪರಮೇಶ್ವರ್‌ಗೆ ಇಡಿ ಶಾಕ್; ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳ ದಾಳಿ‌

  • 64
img ಗೃಹ ಸಚಿವ ಪರಮೇಶ್ವರ್‌ಗೆ ಇಡಿ ಶಾಕ್; ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳ ದಾಳಿ‌
Font size:
Print

ಬೆಂಗಳೂರು: ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್‌ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಾಲ್ಕು ವರ್ಷದ ಹಿಂದೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.
 

No Reviews