News / Blog Details

  • Home
  • >
  • News / Blog Details

ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಆಡಳಿತ ಜಾರಿ

  • 53
img ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಆಡಳಿತ ಜಾರಿ
Font size:
Print

ಬೆಂಗಳೂರು: ರಾಜಧಾನಿ ಬೆಂಗಳೂರಿನ ಆಡಳಿತದ ಹೊಣೆ ಹೊತ್ತಿದ್ದ ಬಿಬಿಎಂಪಿ ಹೆಸರು ನಾಳೆಯಿಂದ ಗ್ರೇಟರ್‌ ಬೆಂಗಳೂರು ಆಡಳಿತ ಜಾರಿಯಾಗಲಿದೆ. ಬೆಂಗಳೂರು ಬೃಹತ್‌ ಮಹಾನಗರ ಪಾಲಿಕೆಯು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಗಿ ಬದಲಾಗಲಿದೆ. ಈ ಕುರಿತು ರಾಜ್ಯ ಸರ್ಕಾರ ಇಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಂದಿಗೆ ಮುಕ್ತಾಯ ಆಗುತ್ತಿದೆ. ರಾಜ್ಯ ಸರ್ಕಾರ ಇಂದು GBAಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ನಾಳೆಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಯಾಗುತ್ತದೆ. ನಾಳೆಯಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬರುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಿಕೊಳ್ಳಲು ಅವಕಾಶ ಇದೆ. ಅಂದ್ರೆ ಹಾಲಿ 709 ಚದರ ಕಿಲೋ ಮೀಟರ್‌ನಿಂದ 1 ಸಾವಿರ ಚದರ ಕಿ.ಮೀ ವ್ಯಾಪ್ತಿಗೆ GBA ವಿಸ್ತರಣೆ ಮಾಡಲಾಗುತ್ತಿದೆ. GBAಗೆ ಬಿಬಿಎಂಪಿ ಅಧೀನದಲ್ಲಿದ್ದ ಪ್ರದೇಶಗಳ ಜತೆಗೆ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿರುವ ಸಾಕಷ್ಟು ಪ್ರದೇಶಗಳೂ ಸೇರ್ಪಡೆ ಆಗುತ್ತದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿ 3 ಅಥವಾ 5 ಪಾಲಿಕೆ ರಚನೆ ಮಾಡಿಕೊಳ್ಳಲು ಅವಕಾಶಗಳಿದೆ. ಬೆಂಗಳೂರಿನ ಪ್ರಾದೇಶಿಕತೆ, ಭೌಗೋಳಿಕತೆಯ ವ್ಯಾಪ್ತಿ, ವಿಸ್ತೀರ್ಣ ಕೂಡ ಏರಿಕೆಯಾಗುತ್ತದೆ. ಸದ್ಯಕ್ಕೆ ಬಿಬಿಎಂಪಿಯನ್ನು 3 ಪಾಲಿಕೆಗಳನ್ನಾಗಿ ವಿಂಗಡಣೆ ಮಾಡಲಾಗುತ್ತಿದ್ದು, ಒಂದೊಂದು ಪಾಲಿಕೆಯು 125 ವಾರ್ಡ್‌ಗಳನ್ನು ಹೊಂದಿರುತ್ತೆ.
 

No Reviews