News / Blog Details

  • Home
  • >
  • News / Blog Details

ಸುಪ್ರೀಂ ಕೋರ್ಟ್ ನಲ್ಲಿ HD ಕುಮಾರಸ್ವಾಮಿಗೆ ಹಿನ್ನಡೆ !

  • 66
img ಸುಪ್ರೀಂ ಕೋರ್ಟ್ ನಲ್ಲಿ HD ಕುಮಾರಸ್ವಾಮಿಗೆ ಹಿನ್ನಡೆ !
Font size:
Print

ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ಕಾರಿ ಜಮೀನುಗಳ ಭೂ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.

2014ರಲ್ಲಿ ಸರ್ವೇ ನಂಬರ್‌ 7 ಮತ್ತು 8ರಲ್ಲಿ ಒತ್ತುವರಿ ಆರೋಪವು ಕುಮಾರಸ್ವಾಮಿ ಅವರ ವಿರುದ್ಧ ಕೇಳಿ ಬಂದಿತ್ತು. ಇದನ್ನು ತೆರವಿಗೆ ಲೋಕಾಯುಕ್ತ ಅಧಿಕಾರಿಗಳು ಸೂಚನೆ ನೀಡಿದ ಬಳಿಕವೂ ಸಂಬಂಧಿಸಿದ ಅಧಿಕಾರಿಗಳು ತೆರವು ಮಾಡಿರಲಿಲ್ಲ ಎಂದ ಆಪಾದನೆ ಇತ್ತು.

 

ಬಳಿಕ ಈ ಕುರಿತು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕರ್ನಾಟಕ ಹೈಕೋರ್ಟ್​​​​​ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆದಿದ್ದು, ಹೈಕೋರ್ಟ್ ತೆರವಿಗೆ ಆದೇಶಿಸಿತು. ಈ ಆದೇಶಕ್ಕೆ ತಡೆ ನೀಡುವಂತೆ ಕೋರಿ ಹೆಚ್​​​​​ಡಿ ಕುಮಾರಸ್ವಾಮಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು

No Reviews