News / Blog Details

  • Home
  • >
  • News / Blog Details

ಮುನಿರತ್ನ ಎಚ್‌ಐವಿ ಸೋಂಕಿತರ ಮೂಲಕ ಹನಿಟ್ರ್ಯಾಪ್‌ ಯತ್ನ ದೃಢ; ಮುನಿರತ್ನ ವಿರುದ್ಧ ಎಸ್‌ಐಟಿ ದೋಷಾರೋಪಣ ಪಟ್ಟಿ ಸಲ್ಲಿಕೆ

  • 79
img ಮುನಿರತ್ನ ಎಚ್‌ಐವಿ ಸೋಂಕಿತರ ಮೂಲಕ ಹನಿಟ್ರ್ಯಾಪ್‌ ಯತ್ನ ದೃಢ; ಮುನಿರತ್ನ ವಿರುದ್ಧ ಎಸ್‌ಐಟಿ ದೋಷಾರೋಪಣ ಪಟ್ಟಿ ಸಲ್ಲಿಕೆ
Font size:
Print

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಹನಿಟ್ರ್ಯಾಪ್‌ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಐಡಿಯ ಎಸ್‌ಐಟಿ ಅಧಿಕಾರಿಗಳು, ಮುನಿರತ್ನ ವಿರುದ್ಧದ ಆರೋಪಗಳು ದೃಢಪಟ್ಟಿರುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಮುನಿರತ್ನ ಸೇರಿದಂತೆ ಏಳು ಜನರ ವಿರುದ್ಧ 3000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ವಿಡಿಯೋಗಳನ್ನು ಬಳಸಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಸೇರಿದಂತೆ ಹಲವು ಆರೋಪಗಳಿವೆ. ಆರ್.​ಆರ್ ನಗರ ಶಾಸಕ ಮುನಿರತ್ನ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.  ಮುನಿರತ್ನ ಸೇರಿ 7 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ . ಒಟ್ಟು 3 ಸಾವಿರ ಪುಟಗಳ ಚಾರ್ಜ್​ಶೀಟ್​​ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್​ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್ ಕುಮಾರ್, ಮಂಜುನಾಥ್ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಆರೋಪಿಗಳು ಪಿಐಗಳು, ಎಸಿಪಿಗಳ ಅಶ್ಲೀಲ ಫೋಟೋ, ವಿಡಿಯೋ ಮಾಡಿರುವುದು ಚಾರ್ಜ್​ಶೀಟ್​ನಿಂದ ಬಯಲಾಗಿದೆ. ಮೂಲಗಳು ತಿಳಿಸಿವೆ. ನಾಯಕರ ಅಶ್ಲೀಲ ಫೋಟೋ ತೋರಿಸುವಂತೆ ಹೇಳಿರುವುದನ್ನೂ ಉಲ್ಲೇಖಿಸಲಾಗಿದೆ. ಎಚ್​ಐವಿ ಸೋಂಕಿತ ಸಂತ್ರಸ್ತೆ, ನೊಂದ ಮಹಿಳೆಯಿಂದ ಸಿಐಡಿ ಅಧಿಕಾರಿಗಳು ಹೇಳಿಕೆಗಳನ್ನು ಪಡೆದಿದ್ದರು ಸಾಕ್ಷ್ಯಗಳ ಹೇಳಿಕೆಯನ್ನೂ ಪಡೆಯಲಾಗಿತ್ತು. ಶಾಸಕ ಮುನಿರತ್ನರನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಬರೋಬ್ಬರಿ 63 ಪ್ರಶ್ನೆಗಳನ್ನು ಮುನಿರತ್ನ  ಮುಂದಿಡಲಾಗಿತ್ತು.

No Reviews