News / Blog Details

  • Home
  • >
  • News / Blog Details

ಓಂ ಪ್ರಕಾಶ್‌ ಕೊಲೆ ಪ್ರಕರಣ : ತಾಯಿ ವಿರುದ್ಧ ಪುತ್ರ ದೂರು

  • 11
img ಓಂ ಪ್ರಕಾಶ್‌ ಕೊಲೆ ಪ್ರಕರಣ : ತಾಯಿ ವಿರುದ್ಧ ಪುತ್ರ ದೂರು
Font size:
Print

ಬೆಂಗಳೂರು: ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಪುತ್ರ ಕಾರ್ತೀಕೇಶ್ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, ಸಹೋದರಿ ಕೃತಿ  ವಿರುದ್ಧ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಪತ್ನಿ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವಾರದಿಂದ ತಾಯಿ ಪಲ್ಲವಿ ಕೊಲೆ ಬೆದರಿಕೆ ಹಾಕುತ್ತಿದ್ದರು. ಕೊಲೆ ಬೆದರಿಕೆ ಹಾಕುತ್ತಿದ್ದರಿಂದ ತಂಗಿ ಸರಿತಾ ಮನೆಗೆ ತಂದೆ ಹೋಗಿದ್ದರು. ಎರಡು ದಿನಗಳ ಹಿಂದೆ ಕೃತಿ ಸರಿತಾ ಮನೆಗ ಹೋಗಿ ಪೀಡಿಸಿ ಕರೆ ತಂದಿದ್ದಳು. ಏ.20ರ ಸಂಜೆ 5 ಗಂಟೆಯ ವೇಳೆ ನಾನು ದೊಮ್ಮಲೂರಿನಲ್ಲಿರುವ ಗಾಲ್ಫ್‌ ಅಸೋಸಿಯೇಷನ್‌ನಲ್ಲಿ ಇದ್ದಾಗ ನಮ್ಮ ಮನೆಯೆ ಪಕ್ಕದ ಮನೆಯವರು ಕರೆ ಮಾಡಿ ನಿಮ್ಮ ತಂದೆಯ ದೇಹ ಕೆಳಗಡೆ ಬಿದ್ದಿರುತ್ತದೆ ಎಂದು ತಿಳಿಸಿದರು. ಕೂಡಲೇ ದೊಮ್ಮಲೂರಿನಿಂದ ಹೊರಟು ಸಂಜೆ 5:45ಕ್ಕೆ ಮನೆಗೆ ಆಗಮಿಸಿದೆ. ಈ ವೇಳೆ ಸ್ಥಳದಲ್ಲಿ ಪೊಲೀಸರು ಮತ್ತು ಸಾರ್ವಜನಿಕರು ಇದ್ದರು. ತಂದೆಯ ತಲೆಯಿಂದ ರಕ್ತ ಬರುತ್ತಿತ್ತು. ದೇಹದ ಪಕ್ಕದಲ್ಲಿ ಬಾಟಲ್‌ ಮತ್ತು ಚಾಕು ಇತ್ತು. ನನ್ನ ತಾಯಿ ಪಲ್ಲವಿ ಮತ್ತು ತಂಗಿ ಕೃತಿ ಖಿನ್ನತೆಯಿಂದ ಬಳಲುತ್ತಿದ್ದು ಅವರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಅವರ ವಿರುದ್ಧ ಕಾನೂ ಕ್ರಮಗಳನ್ನು ಕೈಗೊಳ್ಳಬೇಕು.
 

No Reviews