ಬೆಳಗಾವಿ: ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಅದಕ್ಕೆ ಬೆಂಬಲ ನೀಡಲಾಗುವುದು. ಉಗ್ರರನ್ನು ಮಟ್ಟಹಾಕುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ನಮ್ಮ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಉಗ್ರರನ್ನು ಮಟ್ಟಹಾಕುವುದೇ ನಮ್ಮೆಲ್ಲರ ಉದ್ದೇಶವಾಗಿದೆ ಎಂದು ಸಚಿವೆ ಹೇಳಿದ್ದಾರೆ.