News / Blog Details

  • Home
  • >
  • News / Blog Details

ಆಕಸ್ಮಿಕವಾಗಿ ಗಡಿ ದಾಟಿದ್ದ ಬಿಎಸ್​ಎಫ್​ ಯೋಧನನ್ನು ಬಿಡುಗಡೆ ಮಾಡಿದ ಪಾಕ್‌ 

  • 58
img ಆಕಸ್ಮಿಕವಾಗಿ ಗಡಿ ದಾಟಿದ್ದ ಬಿಎಸ್​ಎಫ್​ ಯೋಧನನ್ನು ಬಿಡುಗಡೆ ಮಾಡಿದ ಪಾಕ್‌ 
Font size:
Print

ನವದೆಹಲಿ : ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನವಾಗಿದ್ದ ಬಿಎಸ್​ಎಫ್​ ಯೋಧ ಪೂರ್ಣಮ್ ಕುಮಾರ್ ಶಾ ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ್ದಾರೆ. ಏಪ್ರಿಲ್ ನಲ್ಲಿ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಮ್‌ ಕುಮಾರ್ ಶಾನನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಏಪ್ರಿಲ್ 23 ರಂದು ಪಂಜಾಬ್‌ನ ಫಿರೋಜ್‌ಪುರ ಬಳಿ ಅಂತಾರಾಷ್ಟ್ರೀಯ ಗಡಿಯನ್ನು ಅಜಾಗರೂಕತೆಯಿಂದ ದಾಟಿದ ನಂತರ 182 ನೇ ಬೆಟಾಲಿಯನ್‌ನ ಬಿಎಸ್‌ಎಫ್ ಜವಾನ್ ಶಾ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದರು. ಸದ್ಯ ಅಮೃತಸರದ ಅಟ್ಟಾರಿಯಲ್ಲಿರುವ ಜಂಟಿ ಚೆಕ್ ಪೋಸ್ಟ್‌ನಲ್ಲಿ ಬೆಳಿಗ್ಗೆ 10:30 ರ ಸುಮಾರಿಗೆ ಹಸ್ತಾಂತರ ನಡೆಯಿತು ಮತ್ತು ಸ್ಥಾಪಿತ ಶಿಷ್ಟಾಚಾರಗಳನ್ನು ಅನುಸರಿಸಿ ಶಾಂತಿಯುತವಾಗಿ ನಡೆಸಲಾಯಿತು ಎಂದು ಬಿಎಸ್‌ಎಫ್ ಹೇಳಿಕೆಯಲ್ಲಿ ತಿಳಿಸಿದೆ. ಪ್ರಸ್ತುತ ಭದ್ರತಾ ಅಧಿಕಾರಿಗಳು ಶಾ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.
 

No Reviews