ನವದೆಹಲಿ : ಪ್ರಥಮ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾಗುತ್ತ ಅವರು ದೆಹಲಿಯ ನೂತನ ಸಿ ಎಂ ಆಗಿ ಪ್ರಮಣಾ ವಚನ ಸ್ವೀಕರಿಸಿದರು.ಹಾಗು ಅವರ ಜೊತೆಗೆ ಸಚಿವ ಸಂಪುಟದ ಕೆಲವು ಅಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು.
ಐತಿಹಾಸಿಕ ರಾಮಲೀಲಾ ಮೈದಾನದಲ್ಲಿಂದು ನಡೆದ ಬೃಹತ್ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಹ ಸಚಿವ ಅಮಿತ್ ಶಾ, ಬಿ ಜೆ ಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಕೇಂದ್ರ ಸಚಿವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ರಾಜ್ಯಪಾಲ ವಿ.ಕೆ ಸಕ್ಸೆನಾ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರು, ಚಂದ್ರಬಾಬು ನಾಯ್ಡು ಸೇರಿದಂತೆ ಎನ್‌ಡಿಎ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಮಾರಂಭಕ್ಕೂ ಮುನ್ನ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲಾಯಿತು.