Font size:
Print
ದಕ್ಷಿಣಕನ್ನಡ: ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಕಕ್ಕಿಂಜಿಯಲ್ಲಿ ಗ್ರಾಮದಲ್ಲಿ ನಡೆದಿದೆ.
ಶಾಲೆಯಲ್ಲಿ ಮಕ್ಕಳು ಪ್ರಾರ್ಥನೆಯನ್ನು ಮುಗಿಸಿ ಕ್ಲಾಸ್ ರೂಮ್‌ಗೆ ಹೋಗುವಾಗ 15 ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ ಇದರಲ್ಲಿ 3 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
ಹೆಜ್ಜೇನು ದಾಳಿ ಮಾಡಿರುವ ವಿದ್ಯಾರ್ಥಿಗಳಿಗೆ ಕಕ್ಕಿಂಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುರಕ್ಷತೆಯ ದೃಷ್ಟಿಯಿಂದ ಶಾಲೆಗೆ ರಜೆಯನ್ನು ಘೋಷಿಸಲಾಗಿದೆ.