News / Blog Details

  • Home
  • >
  • News / Blog Details

ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್‌ ರಾಜೀನಾಮೆ- ಸ್ಪೀಕರ್‌ ಖಾದರ್‌ಗೆ ರಾಜೀನಾಮೆ ಸಲ್ಲಿಕೆ

  • 113
img ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್‌ ರಾಜೀನಾಮೆ- ಸ್ಪೀಕರ್‌ ಖಾದರ್‌ಗೆ ರಾಜೀನಾಮೆ ಸಲ್ಲಿಕೆ
Font size:
Print

ಬೆಂಗಳೂರು: ಸಚಿವ ಶಿವಾನಂದ ಎಸ್ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲನ್ನು ಸ್ವೀಕರಿಸಿ ಈ ಕ್ರಮ ಕೈಗೊಂಡಿರುವುದಾಗಿ ಸ್ಪೀಕರ್ ಯುಟಿ ಖಾದರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ. ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ಅವರು ನಮ್ಮ ಪೂರ್ವಜರ ಮನೆತನದ ಹೆಸರಿನ ಬಗ್ಗೆ ತಪ್ಪಾಗಿ ಮಾತನಾಡಿದ್ದರು. ಅವರೂ ಸಹ ರಾಜೀನಾಮೆ ನೀಡಿ ಅದು ಅಂಗೀಕಾರವಾದರೆ ಮಾತ್ರ ತಮ್ಮ ರಾಜೀನಾಮೆಯನ್ನು ಸ್ವೀಕರಿಸಬೇಕು ಎಂದು ಶಿವಾನಂದ ಪಾಟೀಲ ಹೇಳಿದ್ದಾರೆ.
 

No Reviews