News / Blog Details

  • Home
  • >
  • News / Blog Details

ಲಾಹೋರ್‌ನಲ್ಲಿ ಸಂಭವಿಸಿದ ಮೂರು ಭಯಾನಕ ಸ್ಫೋಟ

  • 55
img ಲಾಹೋರ್‌ನಲ್ಲಿ ಸಂಭವಿಸಿದ ಮೂರು ಭಯಾನಕ ಸ್ಫೋಟ
Font size:
Print

ಇಸ್ಲಾಮಾಬಾದ್‌: ಪಾಕಿಸ್ತಾನದ ಲಾಹೋರ್ ನಗರದಲ್ಲಿ ಗುರುವಾರ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ. ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿವೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳೀಯ ಭದ್ರತಾ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಪ್ರದೇಶವನ್ನು ಸೀಲ್ ಮಾಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಪಾಕಿಸ್ತಾನ ವಾಯುಪಡೆಯ (ಪಿಎಎಫ್) ತರಬೇತಿ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಆವರಣದಲ್ಲಿ ನೆಲೆಗೊಂಡಿರುವ ಕಟ್ಟಡದಿಂದ ಕಪ್ಪು ಹೊಗೆ ಬರುತ್ತಿರುವ ದೃಶ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ವಾಲ್ಟನ್ ರಸ್ತೆಯಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಈ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

No Reviews