News / Blog Details

  • Home
  • >
  • News / Blog Details

ಕಾರಿನ ಟಯರ್‌ ಬ್ಲಾಸ್ಟ್‌ಆಗಿ ರಸ್ತೆ ಅಪಘಾತ.. ಸ್ಥಳದಲ್ಲೇ ಮೂವರು ಸಾವು

  • 90
img ಕಾರಿನ ಟಯರ್‌ ಬ್ಲಾಸ್ಟ್‌ಆಗಿ ರಸ್ತೆ ಅಪಘಾತ.. ಸ್ಥಳದಲ್ಲೇ ಮೂವರು ಸಾವು
Font size:
Print

ಚಿತ್ರದುರ್ಗ: ಚಲಿಸುತ್ತಿದ್ದ ಇನ್ನೋವಾ ಕಾರಿನ ಟಯ‌ರ್ ಸ್ಫೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಹೊರವಲಯದ ಸೀಬಾರದ ಗೋಶಾಲೆ ಬಳಿ ಸಂಭವಿಸಿದೆ. ಮೃತರನ್ನು ತಮಿಳುನಾಡು ಮೂಲದ ಅರ್ಜುನ್ (28), ಸರವಣ್ (30), ಶ್ರೀಧರ್ (30) ಎನ್ನಲಾಗಿದೆ. ಮೃತ ಅರ್ಜುನ್ ತಮಿಳುನಾಡು ಮೂಲದ ಪೊಲೀಸ್ ಪೇದೆಯಾಗಿದ್ದಾರೆ. ಕಾರಿನಲ್ಲಿದ್ದವರು ತಮಿಳುನಾಡಿನ ಕೃಷ್ಣಗಿರಿ ಮೂಲದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ 6 ಮಂದಿ ಗಾಯಾಳುಗಳ ಪೈಕಿ 3 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಗಾಯಗೊಂಡವರನ್ನ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತಮಿಳುನಾಡಿನ ಕೃಷ್ಣಗಿರಿಯಿಂದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

No Reviews